More

    ಅಂಗನವಾಡಿ ರಕ್ಷಣೆಗಾಗಿ ರಾಜ್ಯಾದ್ಯಂತ ಹೋರಾಟ.

    ಬೆಂಗಳೂರು:ಅಂಗನವಾಡಿಯಲ್ಲಿ ಕಲಿಯಬೇಕಿದ್ದ ಮಕ್ಕಳು ಹೊಸ ಶಿಕ್ಷಣ ನೀತಿಯಿಂದ ಶಿಕ್ಷಣ ವಂಚಿತರಾಗುತ್ತಿದ್ದಾರೆ ಇದನ್ನು ವಿರೋಧಿಸಿ ಜೂನ್ 3ರಿಂದ ರಾಜ್ಯಾದ್ಯಂತ ನಿರಂತರ ಹೋರಾಟಗಳು ನಡೆಸಲಾಗುತ್ತಿದೆ ಎಂದು ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ ಆಂದೋದಲನ ಸಂಸ್ಥೆ ಆರೋಪಿಸಿದೆ.

    ಸದ್ಯ ಶಿಕ್ಷಣ ಇಲಾಖೆ 4 ರಿಂದ 6 ವರ್ಷದ ಮಕ್ಕಳಿಗೆ ಎಲ್ ಕೆಜಿ ,ಯುಕೆಜಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ಕೊಡಿಸುವಂತೆ ಸುತ್ತೋಲೆ ಹೊರಡಿಸಿದ್ದು, ಐಸಿಡಿಎಸ್ ಯೋಜನೆಯಡಿ ಸರ್ಕಾರ ನಡೆಸುತ್ತಿರುವ ಅಂಗನವಾಡಿ ಕೇಂದ್ರಗಳು, ಶಾಲಾ ಪೂರ್ವ ಶಿಕ್ಷಣ ಕುರಿತ ಅಂಶಗಳ ಜಾರಿಗೆಗೆ ಧಕ್ಕೆಯಾಗಲಿದೆ ಈ ನಿಟ್ಟಿನಲ್ಲಿ ಜೂನ್.19 ಮತ್ತು 20 ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಸಲು ತಿರ್ಮಾನಿಸಲಾಗಿದೆ ಎಂದು ಸಂಸ್ಥೆಯ ಡಾ.ವಿಜಯಮ್ಮ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಶಿಕ್ಷಣ ಇಲಾಖೆ ಬಡವರ ಮಕ್ಕಳು ಸಹ ಇಂಗ್ಲೀಷ್ ಕಲಿಯಬೇಕು. ಒಂದನೇ ತರಗತಿಗೆ ಬರುವ ಮಗು ಶಾಲಾ ವ್ಯವಸ್ಥೆಗೆ ಸಿದ್ಧರಾಗುವುದರ ಜತೆಗೆ ಸರ್ಕಾರಿ ಶಾಲೆಗಳ ದಾಖಲಾತಿಯನ್ನು ಹೆಚ್ಚಿಸಬಹುದು ಎಂಬುದು ಸರ್ಕಾರದ ವಾದವಾಗಿದ್ದು, 4 ವರ್ಷದಿಂದ ಮೇಲ್ಪಟ್ಟವರಿರುವಾಗಲೇ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕೊಡಿಸಬಹುದು ಎಂಬಅಭಿಪ್ರಾಯ ಅವರದಾಗಿದೆ ಆದರೆ, ಇದರಲ್ಲಿ ಸಾಕಷ್ಟು ಗೊಂದಲಗಳಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿರುವ ಕಾರಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಕ್ಷಣ ಇಲಾಖೆ ಪರಸ್ಪರ ಚರ್ಚೆ ನಡೆಸಿ ತಿರ್ಮಾನ ತೆಗದುಕೊಳ್ಳುವುದು ಸೂಕ್ತ ಎಂದು ಹೇಳಿದರು.

    ಎರಡು ಇಲಾಖೆಗಳಲ್ಲಿರುವ ಗೊಂದಲಗಳನ್ನು ನಿವಾರಿಸಲು ಹಾಗೂ ಶಿಕ್ಷಣ ಅಗತ್ಯತೆಗಳು ಮತ್ತು ಅದರ ಪರಿಣಾಮಗಳನ್ನು ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸುವುದು ಅಗತ್ಯವಾಗಿದೆ. ಹಿಗಾಗಿ 11 -06-2024 ಮತ್ತು 13-05-2024ರ ಸರ್ಕಾರದ ಆದೇಶವನ್ನು ತಡೆ ಹಿಡಿಯಬೇಕು. ಅಲ್ಲದೆ,ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ 7 ಜಿಲ್ಲೆಗಳ ವ್ಯಾಪ್ತಿಯನ್ನು ಸೇರಿದಂತೆ ರಾಜ್ಯದ ಯಾವ ಭಾಗದಲ್ಲಿಯು ಸುತ್ತೋಲೆ ಜಾರಿಯಾಗಬಾರದೆಂದು ಆಗ್ರಹಿಸಿರು.

    ಅಂಗನವಾಡಿ ಕೇಂದ್ರದ ಹೆಸರನ್ನು ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರ ಎಂದು ಬದಲಿಸುವುದು, ಪಿಯುಸಿಗಿಂತ ಹೆಚ್ಚು ವಿದ್ಯಾರ್ಹತೆ ಹೊಂದಿರುವ ಮತ್ತು ಸರ್ಕಾರಿ ಶಾಲೆಗಳ ಆವರಣದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಮೊದಲ ಆದ್ಯತೆ ನೀಡುವುದು ಸೇರಿ ಇನ್ನಿತರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು. ಸಂಸ್ಥೆಯ ಸದಸ್ಯರಾದ ಶಶಾಂಕ್, ಎಸ್.ವರಲಕ್ಷ್ಮಿ,ಎಚ್.ಎಸ್.ಸುನಂದ ಮತ್ತಿತರರಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts