ಬೇಸಿಗೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಹಣ್ಣುಗಳನ್ನು ಸೇವಿಸಿ

ಬೇಸಿಗೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಹಣ್ಣುಗಳನ್ನು ಸೇವಿಸಿ

Published on: 

ಬೇಸಿಗೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಹಣ್ಣುಗಳನ್ನು ಸೇವಿಸಿ

ಬೇಸಿಗೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಹಣ್ಣುಗಳನ್ನು ಸೇವಿಸಿ
ಬೇಸಿಗೆಯ ಬಿರು ಬಿಸಿಲಿನಲ್ಲಿ ದೇಹದ ರೋಗನಿರೋಧಕ ಶಕ್ತಿ ಕುಗ್ಗುವುದು ಸಹಜ. ಸುಸ್ತು ಮತ್ತು ಸೋಂಕುಗಳಿಂದ ದೂರವಿರಲು ಆಹಾರ ಕ್ರಮದಲ್ಲಿ ಬದಲಾವಣೆ ಅಗತ್ಯ. ನಿಮ್ಮ ಇಮ್ಯೂನಿಟಿ ಹೆಚ್ಚಿಸಲು ಮತ್ತು ದೇಹವನ್ನು ತಂಪಾಗಿರಿಸಲು ಕಲ್ಲಂಗಡಿ, ಮಾವು ಹಾಗೂ ಕಿತ್ತಳೆಯಂತಹ ಪೌಷ್ಟಿಕಾಂಶಯುಕ್ತ ಹಣ್ಣುಗಳನ್ನು ಸೇವಿಸಿ.

ಕಲ್ಲಂಗಡಿ ಹಣ್ಣು

ಕಲ್ಲಂಗಡಿ ಹಣ್ಣು
ಇದರಲ್ಲಿ ಶೇ. 90ರಷ್ಟು ನೀರಿನಾಂಶವಿದ್ದು, ದೇಹವನ್ನು ಹೈಡ್ರೇಟ್ ಆಗಿರಿಸುತ್ತದೆ. ಇದರಲ್ಲಿರುವ ವಿಟಮಿನ್ A ಮತ್ತು C ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಮಾವು

ಮಾವು
ಹಣ್ಣುಗಳ ರಾಜ ಮಾವಿನಲ್ಲಿ ವಿಟಮಿನ್ ಸಿ, ಇ ಮತ್ತು ಜಿಂಕ್ ಅಂಶ ಹೇರಳವಾಗಿದೆ. ಇದು ಬಿಳಿ ರಕ್ತಕಣಗಳ ಉತ್ಪಾದನೆಗೆ ಸಹಾಯ ಮಾಡಿ ಸೋಂಕಿನ ವಿರುದ್ಧ ಹೋರಾಡಲು ಶಕ್ತಿ ನೀಡುತ್ತದೆ.

ಪಪ್ಪಾಯಿ

ಪಪ್ಪಾಯಿ
ಪಪ್ಪಾಯಿಯಲ್ಲಿ ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಅಧಿಕವಾಗಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ, ದೇಹದ ಒಟ್ಟಾರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ದ್ರಾಕ್ಷಿ

ದ್ರಾಕ್ಷಿ
ದ್ರಾಕ್ಷಿಯಲ್ಲಿ ಆಂಟಿ-ಆಕ್ಸಿಡೆಂಟ್ಸ್ ಹೆಚ್ಚಾಗಿರುತ್ತವೆ. ಇವು ದೇಹದ ಜೀವಕೋಶಗಳನ್ನು ಹಾನಿಯಾಗದಂತೆ ರಕ್ಷಿಸುತ್ತವೆ.

ಅನಾನಸ್

ಅನಾನಸ್
ಇದರಲ್ಲಿರುವ 'ಬ್ರೋಮೆಲಿನ್' ಎಂಬ ಅಂಶವು ಉರಿಯೂತವನ್ನು ಕಡಿಮೆ ಮಾಡಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

Related Stories

No stories found.