More

    ವಿದ್ಯಾರ್ಥಿಗಳು ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು

    ಬನ್ನಿಕುಪ್ಪೆ : ಶಾಲಾ, ಕಾಲೇಜು ವಿದ್ಯಾರ್ಥಿಗಳು ಉತ್ತಮ ಹವ್ಯಾಸ ರೂಢಿಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಪ್ರಜೆಯಾಗಬೇಕು ಎಂದು ವೈದ್ಯರಾದ ಡಾ.ಪವಿತ್ರಾ ಹೇಳಿದರು.


    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಬನ್ನಿಕುಪ್ಪೆ ಪ್ರೌಢಶಾಲೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಮಾದವಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


    ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ಈ ನಿಟ್ಟಿನಲ್ಲಿ ಮಕ್ಕಳು ಜವಾಬ್ದಾರಿ ಬೆಳಸಿಕೊಳ್ಳಬೇಕು. ದುಶ್ಚಟಗಳಿಂದ ದೂರ ಉಳಿಯಬೇಕು. ಯೋಗ, ಧ್ಯಾನ ನಿತ್ಯ ಚಟುವಟಿಕೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.


    ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಧನಂಜಯ ಮಾತನಾಡಿ, ಇನ್ನೊಬ್ಬರನ್ನು ಅನುಕರಣೆ ಮಾಡುವುದನ್ನು ಮೊದಲು ಬಿಡಬೇಕು. ದೇಶಕ್ಕಾಗಿ ದುಡಿದ ಮಹಾನೀಯರ ತ್ಯಾಗ, ಬಲಿದಾನವನ್ನು ಸ್ಮರಣೆ ಮಾಡಿಕೊಳ್ಳಬೇಕು. ನಿಸ್ವಾರ್ಥವಾಗಿ ಸಮಾಜ ಸೇವೆ ಮಾಡುವ ಮೂಲಕ ಇತರರಿಗೆ ನೆರವಾಗಬೇಕು ಎಂದು ಕೋರಿದರು.


    ಶಿಕ್ಷಕ ಮಹದೇವಸ್ವಾಮಿ, ಜಿಲ್ಲಾ ಜನ ಜಾಗೃತಿ ಅಧ್ಯಕ್ಷ ಸೋಮಶೇಖರ್, ಸದಸ್ಯ ಉಮೇಶ್, ಅರಗು ಬೆಳೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ರೈತ ಚೆಲುವರಾಜು, ಆರೋಗ್ಯ ಸಹಾಯಕರಾದ ಅನಂತ ಪವರ್, ನಾಗರಾಜು, ಮೇಲ್ವಿಚಾರಕಿ ರೇಖಾ, ಸೇವಾ ಪ್ರತಿನಿಧಿಗಳಾದ ಪವಿತ್ರಾ ರವಿ ವಿದ್ಯಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts