More

    T20 World Cup: 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    ಬೆಂಗಳೂರು: ಬರೋಬ್ಬರಿ 11 ವರ್ಷಗಳ ಬಳಿಕ 9ನೇ ಆವೃತ್ತಿಯ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ.

    ಇದನ್ನೂ ಓದಿ: IND Vs SA: ಭಾರತದ ಮುಡಿಗೆ ಟಿ20 ವಿಶ್ವಕಪ್ ಕಿರೀಟ

    ಭಾರತದ ಅದ್ಭುತ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಅಭಿನಂದಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಟೀಂ ಇಂಡಿಯಾವನ್ನು ‘ಇದೊಂದು ಐತಿಹಾಸಿಕ ಕ್ಷಣ. ಅಂತ ಕೊಂಡಾಡಿದ್ದಾರೆ.

    ಸಿದ್ದರಾಮಯ್ಯ ಟ್ಟೀಟ್ ಹೀಗಿದೆ!: ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು. ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ.
    ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚತಕ್ಕದ್ದೆ. ಇದೊಂದು ಐತಿಹಾಸಿಕ ಕ್ಷಣ. ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ, ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ.

    ವಿಮಾನ ನಿಲ್ದಾಣದಲ್ಲೂ ಸಿದ್ದರಾಮಯ್ಯಗೆ ವಿಶ್ವಕಪ್‌ ಕ್ರಿಕೆಟ್‌ ಧ್ಯಾನ!

    ನವದೆಹಲಿ: ರಾಜಕೀಯ ಜಂಜಾಟಗಳ ಮಧ್ಯೆ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೊಬ್ಬ ಅಪ್ಪಟ ಕ್ರಿಕೆಟ್ ಅಭಿಮಾನಿ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

    T20 World Cup: 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    ಸಿಎಂ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಮರಳುವ ತರಾತುರಿಯ ನಡುವೆಯೂ ಕೆಲವು ಕ್ಷಣ ಬಿಡುವು ಮಾಡಿಕೊಂಡು ವಿಮಾನ ನಿಲ್ದಾಣದಲ್ಲಿ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯಾಟವನ್ನು ವೀಕ್ಷಿಸಿ ಸಂಭ್ರಮಿಸಿದ್ದಾರೆ.  ವೈರಲ್‌ ಆಗಿರುವ ವಿಡಿಯೋದಲ್ಲಿ, ಟ್ಯಾಬ್‌ ಒಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಟಿ20 ವಿಶ್ವಕಪ್‌ನ ಭಾರತ- ದಕ್ಷಿಣ ಆಫ್ರಿಕ ನಡುವಿನ ಫೈನಲ್‌ ಪಂದ್ಯಾಟವನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ. ವಿಶೇಷ ವಿಮಾನ ಲ್ಯಾಂಡ್‌ ಆಗಿದ್ದರೂ, ವಿಮಾನದ ಮೆಟ್ಟಿಲು ಏರುವ ಮುನ್ನ ಅವರು ನಿಂತುಕೊಂಡೇ ಪಂದ್ಯ ವೀಕ್ಷಿಸಿದರು.

    ಮೇಕೆದಾಟು ಯೋಜನೆಗೆ ಶೀಘ್ರ ಅನುಮೋದನೆ ನೀಡಿ; ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಒತ್ತಾಯ

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts