More

    IND Vs SA: ಭಾರತದ ಮುಡಿಗೆ ಟಿ20 ವಿಶ್ವಕಪ್ ಕಿರೀಟ

    ಬಾರ್ಬಡೋಸ್​: ರನ್ ಮೆಷಿನ್​ ಕೊಹ್ಲಿಯ ಅಬ್ಬರದ ಅರ್ಧಶತಕ (76 ರನ್​) ಹಾಗೂ ಅಕ್ಷರ್ ಪಟೇಲ್​ ಅವರ ಸ್ಫೋಟಕ ಬ್ಯಾಟಿಂಗ್​ (47 ರನ್​) ಹಾಗೂ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಶಿಸ್ತಿನ ಬೌಲಿಂಗ್​ ದಾಳಿಯ ನೆರವಿನಿಂದ 13 ವರ್ಷಗಳ ಬಳಿಕ ಟೀಂ ಇಂಡಿಯಾ ಐಸಿಸಿ ವಿಶ್ವಕಪ್‌ಗೆ ಮುತ್ತಿಟ್ಟಿದೆ. ಸೌತ್‌ ಆಫ್ರಿಕಾ ವಿರುದ್ಧ ಗೆಲ್ಲುವ ಮೂಲಕ ಟೀಂ ಇಂಡಿಯಾ ಮತ್ತೆ ಚಾಂಪಿಯನ್‌ ಆಗಿದೆ.

    ಇದನ್ನೂ ಓದಿ:  ಮೇಕೆದಾಟು ಯೋಜನೆಗೆ ಶೀಘ್ರ ಅನುಮೋದನೆ ನೀಡಿ; ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಒತ್ತಾಯ 

    ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಆಸೀಸ್ ವಿರುದ್ಧ ಸೋತಿತ್ತು. ಆದರೆ ಈಗ ಟಿ20 ವಿಶ್ವಕಪ್‌ ಗೆಲ್ಲುವ ಮೂಲಕ ಮತ್ತೆ ಚಾಂಪಿಯನ್‌ ಆಗಿದೆ. ಇಂದಿನ ರಣರೋಚಕ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ಸ್ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಸಲಿ ಚಾಂಪಿಯನ್‌ ಯಾರು ಅನ್ನೋದನ್ನು ತೋರಿಸಿಕೊಟ್ಟಿದ್ದಾರೆ.

    ಭಾರತದ ಪಾಲಿಗೆ ಇದು ಸ್ಮರಣೀಯ ಟ್ರೋಫಿ. ತಂಡ ನಾಯಕ ರೋಹಿತ್​ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗೆ ಅಪೇಕ್ಷಿತ ಚಾಂಪಿಯನ್ ಪಟ್ಟ. ಅತ್ತ ದಕ್ಷಿಣ ಆಫ್ರಿಕಾ ತಂಡ ತನ್ನ ಚೋಕರ್ಸ್​ ಹಣೆಪಟ್ಟಿಯನ್ನು ಮತ್ತಷ್ಟು ದಿನ ಕಟ್ಟಿಕೊಳ್ಳುವಂತಾಯಿತು. 4 ದಶಕಗಳ ತನ್ನ ವಿಶ್ವಕಪ್​ ಅಭಿಯಾನದಲ್ಲಿ ಒಂದೇ ಒಂದು ಟ್ರೋಫಿ ಗೆಲ್ಲಲು ಸಾಧ್ಯವಾಗದೇ ನಿರಾಸೆ ಎದುರಿಸಿತು.

    ಇಲ್ಲಿನ ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ನಿಗದಿತ 20 ಓವರ್​ಗಳು ಮುಕ್ತಾಯಗೊಳ್ಳುವಾಗ 7 ವಿಕೆಟ್​ ನಷ್ಟ ಮಾಡಿಕೊಂಡು 176 ರನ್ ಬಾರಿಸಿತು. ಈ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಸೂಕ್ತ ಪ್ರತಿರೋಧ ತೋರಿತಾದರೂ ಅಂತಿಮ ಹಂತದಲ್ಲಿ ಎಡವಿತು. ಈ ಮೂಲಕ ಟ್ರೋಫಿ ಭಾರತದ ಪಾಲಾಯಿತು.

    ಮೇಕೆದಾಟು ಯೋಜನೆಗೆ ಶೀಘ್ರ ಅನುಮೋದನೆ ನೀಡಿ; ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಒತ್ತಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts