More

    ಸೇವಾ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ

    ಚಿಕ್ಕಮಗಳೂರು: ಸರ್ಕಾರಿ ಉದ್ಯೋಗದಲ್ಲಿ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದ್ದು, ಇದಕ್ಕೆ ದುಃಖಪಡುವ ಅಥವಾ ಸಮಸ್ಯೆ ಬಂದಿದೆ ಎಂದು ವಿಚಲಿತರಾಗುವ ಅಗತ್ಯವಿಲ್ಲ ಎಂದು ಇಂದು ನಿವೃತ್ತರಾಗುತ್ತಿರುವ ಮರ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಪರಮೇಶ್ವರ ಅವರು ಅಭಿಪ್ರಾಯಪಟ್ಟರು.

    ತಾಲೂಕಿನ ಮರ್ಲೆ ಶಾಲೆಯಲ್ಲಿ ಆಯೋಜಿಸಲಾಗಿದ್ದ ಬಿಳ್ಕೊಡುಗೆ ಸಮಾರಂಭದಲ್ಲಿ ಅಬಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಉದ್ಯೋಗದ ಅವಧಿಯಲ್ಲಿ ಪ್ರತಿಯೊಬ್ಬ ಸಿಬ್ಬಂದಿಯೂ, ಸಾರ್ವಜನಿಕರೂ ಹೆಚ್ಚಿನ ಸಹಕಾರ ನೀಡಿದ್ದಾರೆ. ಪ್ರತಿಭಾ ಕಾರಂಜಿ ಸೇರಿದಂತೆ ಶಾಲೆಯ ಎಲ್ಲ ಕಾರ್ಯಕ್ರಮಗಳಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿz್ದೆÃ ಎಲ್ಲ ಯಶಸ್ಸಿಗೆ ಕಾರಣ ಎಂದು ಹೇಳಿದರು.
    ನನ್ನ ಸೇವಾವಧಿಯಲ್ಲಿ ಪಾಲಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನೀಡಿದ ಉತ್ತಮ ಸಹಕಾರ ಸ್ಪಂದನೆ ಯಶಸ್ಸಿಗೆ ಕಾರಣ. ಮುಂದೆಯೂ ಇದೇ ರೀತಿ ಸಹಕಾರ ನೀಡುವ ಮೂಲಕ ಶಾಲೆಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
    ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ನಾಗೇಶ್ ಗೌಡ ಮಾತನಾಡಿ, ಇಂದು ನಿವೃತ್ತಿ ಹೊಂದುತ್ತಿರುವ ಮುಖ್ಯ ಶಿಕ್ಷಕ ಪರಮೇಶ್ವರ ಅವರಿಗೆ ಗ್ರಾಮಸ್ಥರು ಹಾಗೂ ಶಾಲೆ ಪರವಾಗಿ ಶುಭ ಹಾರೈಸಿ, ನಿವೃತ್ತರಿಗೆ ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
    ಸಹ ಶಿಕ್ಷಕ ಯೋಗೀಶ್ ಮಾತನಾಡಿ, ಇದೇ ಶಾಲೆಯಲ್ಲಿ ಸುದೀರ್ಘ ೧೭ ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ನಿವೃತ್ತಿಯಾಗುತ್ತಿರುವ ಮುಖ್ಯ ಶಿಕ್ಷಕ ಪರಮೇಶ್ವರ ಅವರು ಯಾರಿಗೂ ನೋವುಂಟಾಗದAತೆ ಸೇವೆ ಸಲ್ಲಿಸಿದ್ದಾರೆ. ಸಿಬ್ಬಂದಿಯನ್ನು ಸಮಾನವಾಗಿ ಕಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಅವರಿಗೆ ಆಯಸ್ಸು, ಆರೋಗ್ಯ, ನೆಮ್ಮದಿಯ ಬದುಕು ಸಿಗಲಿ ಎಂದು ಆಶಿಸಿದರು.
    ಈ ಸಂದರ್ಭದಲ್ಲಿ ಶಿಕ್ಷಕರಾದ ಪಾರ್ವತಮ್ಮ, ಸಿ.ವಿ.ರಾಧ, ಅಪ್ತಾಬ್ ಅಹಮದ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts