More

    ಅಭಿವೃದ್ಧಿ, ಪರಿಸರ ಸಂರಕ್ಷಣೆಯಲ್ಲಿ ಸಮತೋಲನ ಅಗತ್ಯ

    ಚಿಕ್ಕಮಗಳೂರು: ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯಲ್ಲಿ ಸಮತೋಲನ ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಶ್ರೀ ಪಾರ್ವತಿ ಮಹಿಳಾ ಮಂಡಳಿ ಸಹಕಾರ್ಯದರ್ಶಿ ಪಾರ್ವತಿ ಬಸವರಾಜು ಅಭಿಪ್ರಾಯಪಟ್ಟರು.

    ನಗರದ ಸುವರ್ಣ ಮಾಧ್ಯಮ ಭವನದಲ್ಲಿ ಶ್ರೀ ಪಾರ್ವತಿ ಮಹಿಳಾ ಮಂಡಳಿಯಿAದ ಆಯೋಜಿಸಲಾಗಿದ್ದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮವನ್ನುz್ದೆÃಶಿಸಿ ಮಾತನಾಡಿದ ಅವರು, ರಸ್ತೆ ವಿಸ್ತರಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ ನೂರಾರು ವರ್ಷಗಳ ಮರಗಳನ್ನು ಕಡಿಯಲಾಗುತ್ತಿದೆ. ಗಣಿಗಾರಿಕೆಯಿಂದಾಗಿ ಬೆಟ್ಟಗುಡ್ಡಗಳು ಕರಗುತ್ತಿವೆ. ಕಾಡು ಬರಿದಾಗುತ್ತಿದ್ದು ವನ್ಯಜೀವಿಗಳು ಆಹಾರ ಅರಸಿ ನಗರ-ಜನವಸತಿ ಪ್ರದೇಶಗಳಿಗೆ ಬರುತ್ತಿವೆ. ಇದರಿಂದಾಗಿ ಮಾನವ ವನ್ಯಜೀವಿ ಸಂಘರ್ಷ ಆರಂಭಗೊAಡಿದೆ. ಹೀಗಾಗಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
    ಅಂಗನವಾಡಿ ಶಿಕ್ಷಕಿಯರ ಸಂಘದ ತಾಲೂಕು ಅಧ್ಯಕ್ಷೆ ಎಸ್.ಶೈಲಾ ಬಸವರಾಜು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಪರಿಸರ ಗೀತೆ ಹಾಡಿದರು. ಪಾರ್ವತಿ ಮಹಿಳಾಮಂಡಳಿ ಅಧ್ಯಕ್ಷೆ ಸುಮಿತ್ರಾಶಾಸ್ತಿç ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಅನ್ನಪೂರ್ಣಹಾಲೇಶ್, ಕಮಲಾಕ್ಷಿ ಸೋಮಶೇಖರ್, ಪುಷ್ಪಾ ಕುಮಾರಸ್ವಾಮಿ, ಮಹೇಶ್ವರಿ, ಶಶಿಕಲಾ ನಂಜುAಡಸ್ವಾಮಿ, ಸುಮಾ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts