More

    ತಿರುಮಲ ದರ್ಶನ ಟಿಕೆಟ್, ಲಡ್ಡು ದರ ಇಳಿಕೆ.. ಟಿಟಿಡಿ ಹೇಳಿದ್ದೇನು?

    ತಿರುಪತಿ: ತಿಮ್ಮಪ್ಪನ ದರ್ಶನಕ್ಕೆ 300ರೂ. ನ ವಿಶೇಷ ಟಿಕೆಟ್​ ಮತ್ತು ಲಡ್ಡು ಬೆಲೆಯಲ್ಲಿ ಭಾರಿ ಇಳಿಕೆಯಾಗಲಿದೆ ಎಂಬ ಸುದ್ದಿ ಹರಡಿದ್ದು, ಇದಕ್ಕೆ ಟಿಟಿಡಿ ಸ್ಪಷ್ಟನೆ ನೀಡಿದೆ.

    ಇದನ್ನೂ ಓದಿ: ಮೂರುವರೆ ಟನ್ ಹಾಲಿನ ಪುಡಿ ಅಕ್ರಮ ದಾಸ್ತಾನು; ಶಾಲಾ ಮಕ್ಕಳಿಗೆ ಪೂರೈಸಬೇಕಿದ್ದ ಪೌಡರ್; ಸವಣೂರಿನ ಗುತ್ತಿಗೆದಾರನ ಮನೆಯ ಶೆಡ್‌ನಲ್ಲಿ ಸಂಗ್ರಹ

    ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಸರ್ಕಾರ ರಚನೆಯಾದ ಹಿನ್ನೆಲೆಯಲ್ಲಿ ತಿರುಪತಿ ಮೇಲೆ ವಿಶೇಷ ಗಮನ ಹರಿಸಿರುವ ಹಿನ್ನೆಲೆಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ಸೇವೆಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಅಧಿಕಾರಿಗಳು ಸ್ಪಷ್ಟನೆ ನೀಡಿದೆ.

    ಶ್ರೀವೆಂಕಟೇಶ್ವರ ಸ್ವಾಮಿಯ ವಿಶೇಷ ಪ್ರವೇಶ ದರ್ಶನ ಹಾಗೂ ಲಡ್ಡು ಪ್ರಸಾದದ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಸಂಬಂಧ ನಡೆಯುತ್ತಿರುವ ಪ್ರಚಾರ ಸತ್ಯಕ್ಕೆ ದೂರವಾದದ್ದು. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಮಾಹಿತಿಯನ್ನು ಯಾರೂ ನಂಬಾರದು. ವಿಶೇಷ ಪ್ರವೇಶ ದರ್ಶನಕ್ಕೆ 300ರೂ., ಲಡ್ಡು ಪ್ರಸಾದ 50ರೂ. ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಟಿಟಿಡಿ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

    ವಿಶೇಷ ಪ್ರವೇಶ ದರ್ಶನಕ್ಕಾಗಿ ದಲ್ಲಾಳಿಗಳನ್ನು ಸಂಪರ್ಕಿಸಬೇಡಿ. ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳ ಹೆಸರಿನಲ್ಲಿ ಪ್ರಸಾರವಾಗುತ್ತಿರುವ ಮಾಹಿತಿಯನ್ನು ಯಾರೂ ನಂಬಬೇಡಿ ಎಂದು ಸೂಚಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಅಧಿಕೃತ ವೆಬ್‌ಸೈಟ್‌ನೊಂದಿಗೆ ವಿವಿಧ ರಾಜ್ಯಗಳ ಪ್ರವಾಸೋದ್ಯಮ ಇಲಾಖೆಗಳಿಗೆ ಕೆಲವು ಟಿಕೆಟ್‌ಗಳನ್ನು ನಿಗದಿಪಡಿಸಲಾಗಿದೆ ಎಂದು ವಿವರಿಸಲಾಗಿದೆ.

    ದಲ್ಲಾಳಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಟಿಟಿಡಿ ಸ್ಪಷ್ಟಪಡಿಸಿದ್ದು , ಬೇರೆಲ್ಲೂ ದರ್ಶನಕ್ಕೆ ಟಿಕೆಟ್ ಸಿಗುವುದಿಲ್ಲ. ದಲ್ಲಾಳಿಗಳನ್ನು ನಂಬಿ ಮೋಸ ಹೋಗಬೇಡಿ ಎಂದು ಟಿಟಿಡಿ ಎಚ್ಚರಿಸಿದೆ.

    ಭಾವಿ ಪತಿಗಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗ್ತಾರಾ ಸೋನಾಕ್ಷಿ ಸಿನ್ಹಾ!

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts