More

    ಸರ್ಕಾರಿ ಆಸ್ಪತ್ರೆಗಳಿಗೂ ಇನ್ನು ಮುಂದೆ ಶ್ರೇಣೀಕರಣ ನಿಗದಿ: ಸಚಿವ ದಿನೇಶ್ ಗುಂಡೂರಾವ್

    ಬೆಂಗಳೂರು: ರಾಜ್ಯದ ಜಿಲ್ಲಾ, ತಾಲೂಕು ಆಸ್ಪತ್ರೆಗಳು, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಾರ್ಯಕ್ಷಮತೆ, ಸೇವಾಗುಣಮಟ್ಟ ಮತ್ತಿತರ ಮಾನದಂಡ ಆಧರಿಸಿ ಶ್ರೇಣೀಕರಣ ವ್ಯವಸ್ಥೆ ಅಳವಡಿಸಲಿದ್ದು, ಪೈಪೋಟಿಯಿಂದ ಸರ್ಕಾರಿ ಆಸ್ಪತ್ರೆಗಳು ಸುಧಾರಿಸಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

    ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ ತರುವ ಪ್ರಯತ್ನ ಮಾಡಿದ್ದೇವೆ. ಆರಂಭದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿಯೇ ಸರಬರಾಜು ಆಗುತ್ತಿರಲಿಲ್ಲ. ಶೇ 30 ರಷ್ಟು ಮಾತ್ರ ಔಷಧಿ ನಿಗಮದಿಂದ ಔಷಧಿ ಪೂರೈಕೆಯಾಗುತ್ತಿತ್ತು.

    ಇದೀಗ ಸಾಕಷ್ಟು ಸುಧಾರಣೆ ತಂದಿದ್ದು, ಶೇ 80 ರಷ್ಟು ಔಷಧಿ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆಯಾಗುತ್ತಿದೆ. ಮುಂಬರುವ ಎರಡು ತಿಂಗಳೊಳಗೆ ಸಂಪೂರ್ಣವಾಗಿ ಔಷಧಿ ಸರಬರಾಜು ಸರಿಪಡಿಸುವುದಾಗಿಭರವಸೆ ನೀಡಿದರು.

    ವೃಂದ, ನೇಮಕ ನಿಯಮಗಳು ಸಿದ್ಧ

    ಕಳೆದ 30 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮ ಪರಿಷ್ಕರಣೆಯಾಗಿರಲಿಲ್ಲ. ಇದೀಗ ಪರಿಷ್ಕರಣೆ ಅಂತಿಮ ಹಂತದಲ್ಲಿದ್ದು, ಒಂದು ತಿಂಗಳ ಒಳಗಾಗಿ ಜಾರಿಗೆ ಬರಲಿದೆ.  ವಿಶೇಷವಾಗಿ 8 ವರ್ಷಗಳ ಬಳಿಕ ಆರೋಗ್ಯ ಇಲಾಖೆ ವರ್ಗಾವಣೆ ಪೂರ್ಣ ಪ್ರಮಾಣದಲ್ಲಿ ಕೌನ್ಸಿಲಿಂಗ್ ಮೂಲಕ ನಡೆಸಲಾಗುತ್ತಿದೆ. ಪಾರದರ್ಶಕ ಆಡಳಿತವನ್ನು ಇಲಾಖೆಯಲ್ಲಿ ತರಲಾಗಿದೆ ಎಂದರು.

    ಡಯಾಲಿಸಿಸ್ ವ್ಯವಸ್ಥೆ ಸದೃಢಗೊಳಿಸಲಾಗಿದೆ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಇಂದು ಹಠಾತ್ ಹೃದಯಘಾತಕ್ಕೆ ಒಳಗಾಗುವವರ ಜೀವ ಉಳಿಸುವಲ್ಲಿ ಸಹಕಾರಿಯಾಗಿದೆ ಎಂದು ವಿವರಿಸಿದರು.

    ವೈದ್ಯರ ಮೇಲೆ ನಂಬಿಕೆ

    ವೈದ್ಯರನ್ನು ದೈವತ್ವಕ್ಕೆ ಹೊಲಿಸಿರುವುದರ ಹಿನ್ನಲೆ ಇದೊಂದು ಸೇವಾ ಮನೋಭಾವದ ಕಾರ್ಯ ಎಂಬುದನ್ನ ಅರ್ಥಮಾಡಿಕೊಳ್ಳಬೇಕು. ವೈದ್ಯರಿಗೆ ಅಗತ್ಯ ಸೌಕರ್ಯಗಳನ್ನ ಒದಗಿಸಿಕೊಡಲು ಸರ್ಕಾರ ಬದ್ಧವಾಗಿದೆ. ಒಂದು ಸರ್ಕಾರವಾಗಿ ವೈದ್ಯರನ್ನ ನಾವು ಚೆನ್ನಾಗಿ ನೋಡಿಕೊಂಡರೆ, ನಮ್ಮ ಜನರ ಆರೋಗ್ಯವನ್ನು ವೈದ್ಯರು ಚೆನ್ನಾಗಿ ನೋಡಿಕೊಳ್ತಾರೆ ಎಂಬ ನಂಬಿಕೆ ನನಗಿದೆ ಎಂದು ಸಚಿವರು ಹೇಳಿದರು.

    ನಮ್ಮ ವೈದ್ಯರು ಮನಸ್ಸು ಮಾಡಿದರೆ ರಾಜ್ಯದ ಬಡವರು ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬಹುದು. ಬಿ.ಸಿ ರಾಯ್ ಅವರು ಪಶ್ಮಿಮ ಬಂಗಾಳ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲೂ ಅವರ ವೃತ್ತಿ ಮರೆತಿರಲಿಲ್ಲ.‌ ಅವರ ಜನ್ಮದಿನದಂದು ಆಚರಿಸುವ ವೈದ್ಯರ ದಿನಾಚರಣೆ ಎಲ್ಲ ವೈದ್ಯರಿಗೆ ಪ್ರೇರಣೆಯಾಗಲಿ. ಇನ್ನೂ ಹೆಚ್ಚು ಸೇವಾ ಮನೋಭಾವದೊಂದಿಗೆ ವದ್ಯರು ಜನರಿಗೆ ಗಣಮಟ್ಟದ ಆರೋಗ್ಯ ಸೇವೆ ಒದಗಿಸುವಂತಾಗಲಿ ಎಂದು  ಸಚಿವ ದಿನೇಶ್ ಗುಂಡೂರಾವ್ ಆಶಾಭಾವನೆ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts