More

    ಜು.೧ ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿಡುರ ಪರಿಣಾಮ ಜು.೧ ರಿಂದ ಜುಲೈ ೩೦ ರವರೆಗೆ ಭಾರಿ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಭಂದಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ವೆಂಕಟ್ ರಾಜಾ ಆದೇಶಿಸಿದ್ದಾರೆ.


    ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ. ವಾಹನದ ನೋಂದಣಿ ತೂಕ ೧೮,೫೦೦ ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‌ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್‌, ಶಿಪ್ ಕಾರ್ಗೋ ಕಂಟೈನರ್ಸ್‌, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ‌್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಮಳೆಗಾಲ ಮುಗಿಯುವವರೆಗೆ ನಿರ್ಭಂದಿಸಲಾಗಿದೆ ಎಂದು ತಿಳಿಸಿದ್ದಾರೆ.


    ನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು(ಮಲ್ಟಿ ಆಕ್ಸಿಲ್ ಬಸ್‌ಗಳು ಸೇರಿದಂತೆ) ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಅನುಮತಿಸಿದ್ದಾರೆ. ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ೨೭೫ ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‌ಪೋಸ್ಟ್ ನಿರ್ಮಿಸಿ, ದಿನದ ೨೪ ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಿದೆ ಎಂದು ವೆಂಕಟ್ ರಾಜಾ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts