More

    ಸಂಚಾರ ನಿಯಮ ಪಾಲನೆ ಕಡ್ಡಾಯ

    ನಿಪ್ಪಾಣಿ: ಮಾದಕ ವಸ್ತುಗಳ ವಿರೋಧಿ ದಿನ ಹಾಗೂ ದ್ವಿಚಕ್ರ ವಾಹನ ಸವಾರರಲ್ಲಿ ಹೆಲ್ಮೆಟ್ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದಲ್ಲಿ ಏರ್ಪಡಿಸಿದ್ದ ಬೈಕ್ ರ‌್ಯಾಲಿಗೆ ಜಿಲ್ಲಾಧಿಕಾರಿ ಡಾ.ನಿತೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಪಂ ಸಿಇಒ ರಾಹುಲ ಶಿಂಧೆ ಚಾಲನೆ ನೀಡಿದರು.

    ಜಿಲ್ಲಾಧಿಕಾರಿ ಡಾ. ನಿತೇಶ ಪಾಟೀಲ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಾಹನ ಸವಾರರು ಸಂಚಾರ ನಿಯವ ನಿರ್ಲಕ್ಷಿಸುತ್ತಿದ್ದಾರೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಪ್ರತಿಯೊಬ್ಬರೂ ಸುರಕ್ಷತೆಗಾಗಿ ನಿಯಮ ಪಾಲಿಸಬೇಕು.ಹಲವರು ಮಾದಕ ವಸ್ತುಗಳಿಗೆ ಮಾರುಹೋಗುತ್ತಿದ್ದು, ಹಲವು ಗಂಭೀರ ಆರೋಗ್ಯದ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಮಾದಕ ವಸ್ತುಗಳಿಂದ ದೂರ ಉಳಿಯಬೇಕು ಎಂದರು.

    ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ತಹಸೀಲ್ದಾರ್ ಮುಜಫ್ಫರ್ ಬಳಿಗಾರ, ತಾಪಂ ಇಒ ಮಹಾಲಿಂಗ ನಂದಗಾವಿ, ರವಿಕುಮಾರ ಹುಕ್ಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ನಾಯಿಕ್, ಸಿಪಿಐ ಬಿ.ಎಸ್. ತಳವಾರ, ಪಿಎಸ್‌ಐಗಳಾದ ಉಮಾದೇವಿ ಸಿ., ಶಿವರಾಜ್ ನಾಯಿಕವಾಡಿ, ಅನಿತಾ ರಾಠೋಡ, ರಮೇಶ ಪವಾರ ಹಾಗೂ ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts