ಕರೊನಾ ಸೋಂಕಿತರಲ್ಲಿ ಇಬ್ಬರು ಗುಣಮುಖ, ಕೊಂಚ ತಗ್ಗಿದ ಆತಂಕ

ಬೆಂಗಳೂರು: ಕರೊನಾ ಸೋಂಕಿತರಲ್ಲಿ ಇಬ್ಬರು ಸಂಪೂರ್ಣವಾಗಿ ಗುಣಮುಖ ರಾಗಿರುವುದು ನಿರಾಳತೆ ಮೂಡಿಸಿದೆ. ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಈ ಇಬ್ಬರನ್ನು ಶುಕ್ರವಾರ ಡಿಸ್ಚಾರ್ಜ್ ಮಾಡಲಾಗುತ್ತದೆ. ರಾಜ್ಯದಲ್ಲಿ ಕರೊನಾ ವೈರಸ್ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಇವರಲ್ಲಿ ಈಗಾಗಲೇ ಒಬ್ಬರು ಮೃತಪಟ್ಟಿದ್ದಾರೆ. ಉಳಿದ 14 ಮಂದಿಗೆ ಪ್ರತ್ಯೇಕ ವಾರ್ಡ್​ನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದು, ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. 14 ಮಂದಿಯ ಪೈಕಿ ರೋಗಿ – 2 ಮತ್ತು ರೋಗಿ – 5 ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರ ಮನೆಗೆ ತೆರಳಲಿದ್ದಾರೆ. ಕರೊನಾ … Continue reading ಕರೊನಾ ಸೋಂಕಿತರಲ್ಲಿ ಇಬ್ಬರು ಗುಣಮುಖ, ಕೊಂಚ ತಗ್ಗಿದ ಆತಂಕ