More

    ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ

    ನವದೆಹಲಿ: ಸಂಸದರ ಪ್ರಮಾಣವಚನ ಮುನ್ನ ಕೇಂದ್ರ ಸಚಿವ ಎಚ್​,ಡಿ ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿ ಮಾಡಿ, ಅಭಿನಂದನೆ ತಿಳಿಸಿದರು.

    ಇದನ್ನೂ ಓದಿ:  ನೀಟ್‌-ಯುಜಿ’ ರದ್ದುಮಾಡಿ ರಾಜ್ಯಗಳೇ ಪರೀಕ್ಷೆ ನಡೆಸಲಿ: ಸಿಎಂ ಮಮತಾ ಆಗ್ರಹ

    ಇದೇ ವೇಳೆ ಉಭಯ ನಾಯಕರು ಸ್ವಲ್ಪ ಸಮಯ ಪ್ರತ್ಯೇಕವಾಗಿ ಗೌಪ್ಯ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ನಂತರ ಜೆಡಿಎಸ್ ಮುಖಂಡರಾದ ಬಂಡೆಪ್ಪ ಕಾಶೆಂಪುರ್, ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್ ಸಂಸದ ಮಲೇಶ್ ಬಾಬು, ಜೆಡಿಎಸ್ ಮುಖಂಡ ಎನ್ ಆರ್ ಸಂತೋಷ್ ಕೂಡ ಎಚ್ಡಿಕೆ ಭೇಟಿಯಾದರು. ಸಂಸದರಿಗೆ ಮತ್ತು ಸಚಿವರಿಗೆ ಇನ್ನೂ ಅಧಿಕೃತ ನಿವಾಸ ಹಂಚಿಕೆಯಾಗದ ಹಿನ್ನೆಲೆಯಲ್ಲಿ ಬಹುಪಾಲು ಸಂಸದರು ಕರ್ನಾಟಕ ಭವನದಲ್ಲೇ ವಾಸ್ತವ್ಯ ಹೂಡಿದ್ದಾರೆ.

    ಕನ್ನಡದಲ್ಲಿ ಪ್ರಮಾಣ ಸ್ವೀಕರಿಸಿದ ಕೇಂದ್ರ ಸಚಿವ ಎಚ್​ಡಿಕೆ

    ಲೋಕಸಭೆ ಸದಸ್ಯರಾಗಿ ಮಂಡ್ಯ ಸಂಸದ ಎಚ್‌ಡಿ ಕುಮಾರಸ್ವಾಮಿ ಅವರು ಪ್ರಮಾನವಚನ ಸ್ವೀಕಾರ ಮಾಡಿದರು. ಸೋಮವಾರ ಲೋಕಸಭೆಯಲ್ಲಿ ಸದಸ್ಯರಾಗಿ ಅವರು ಮಾತೃ ಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.

    ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ

    ಸೋಮವಾರ ಸಂಸತ್‌ನಲ್ಲಿ ಮೊದಲ ಲೋಕಸಭೆ ಅಧಿವೇಶನ ಆರಂಭವಾಯಿತು. ಪದ್ದತಿಯಂತೆ ಎಲ್ಲಾ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್‌ ಅವರ ಸಮ್ಮುಖದಲ್ಲಿ ಎಚ್‌ಡಿಕೆ ವಚನ ಬೋಧಿಸಿದರು.ಈ ವೇಳೆ ಕನ್ನಡದಲ್ಲಿ ಪ್ರಮಾಣ ವಚನವನ್ನು ಮಂಡ್ಯ ಲೋಕಸಭೆ ಸದಸ್ಯರು, ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್‌ ಕುಮಾರಸ್ವಾಮಿ ಅವರು ಸ್ವೀಕರಿಸಿದರು.

    ಸಚಿವರಾಗಿ ಇಂಗ್ಲಿಷ್‌ನಲ್ಲಿ ಪ್ರಮಾನವಚನ ಸ್ವೀಕರಿಸಿದ್ದ ಎಚ್‌ಡಿಕೆ ಇನ್ನು ಕೇಂದ್ರ ಸಚಿವರಾಗಿ ಎಚ್‌ಡಿ ಕುಮಾರಸ್ವಾಮಿ ಅವರು ಇಂಗ್ಲಿಷ್‌ನಲ್ಲೇ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಸಹಜವಾಗಿ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಕನ್ನಡದ ಬದಲಾಗಿ ಇಂಗ್ಲಿಷ್‌ನಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದರು.

    ಬಿಬಿಎ ವಿದ್ಯಾರ್ಥಿನಿ ಪ್ರಬುದ್ಧಾ ಕೊಲೆ ಕೇಸ್ ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts