More

    ಬಾಲಾಪರಾಧ ಘಟಿಸದಂತೆ ಪಾಲಕರಿಂದ ನಿಗಾ: ಎಸ್‌ಐ ಅವಿನಾಶ್ ಸಲಹೆ

    ಉಪ್ಪಿನಂಗಡಿ: ಬಾಲಾಪರಾಧ, ಮಾದಕ ದ್ರವ್ಯ ಸೇವನೆ, ಸೈಬರ್ ಕ್ರೈಂ ಇನ್ನಿತರ ಸಮಾಜಘಾತುಕ ಚಟುವಟಿಕೆಗಳ ಜಾಲದಲ್ಲಿ ವಿದ್ಯಾರ್ಥಿಗಳು ಸಿಲುಕಿಕೊಳ್ಳುವ ಬಗ್ಗೆ ಪಾಲಕರು ಜಾಗೃತರಾಗಬೇಕು ಎಂದು ಉಪ್ಪಿನಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅವಿನಾಶ್ ಹೇಳಿದರು.

    ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗ ಪಾಲಕರ ಸಭೆಯಲ್ಲಿ ಮಾಹಿತಿ ನೀಡಿದರು.

    ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಗುಣವತಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಪಾತ್ರವೂ ಬಹುಮುಖ್ಯವಾಗಿದ್ದು, ಮಕ್ಕಳ ಕಲಿಕೆಗೆ ಪಾಲಕರು ಪ್ರೇರಣಾದಾಯಕರಾಗಬೇಕು ಎಂದು ಹೇಳಿದರು.

    ಶಾಲೆಯ ಪ್ರಭಾರ ಉಪ ಪ್ರಾಂಶುಪಾಲೆ ಪೂರ್ಣಿಮಾ ನಾಯಕ್ ಮಾತನಾಡಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳಿಗಿರುವ ಪಠ್ಯ, ಸಹಪಠ್ಯ ಅವಕಾಶಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಉಪ್ಪಿನಂಗಡಿ ಗ್ರಾಪಂ ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಸದಸ್ಯ ಯು.ಟಿ.ತೌಸೀಫ್ ಮಾತನಾಡಿದರು. ಅಭಿವೃದ್ಧಿ ಸಮಿತಿ ಸದಸ್ಯರಾದ ಅಬ್ದುಲ್ ಮಜೀದ್, ಸಿದ್ದಿಕ್ ಉಪಸ್ಥಿತರಿದ್ದರು. ಶಿಕ್ಷಕಿ ಕವಿತಾ ಕಾರ್ಯಕ್ರಮ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts