More

    ನಾಮಫಲಕದಲ್ಲಿ ಶೇ.60 ಕನ್ನಡ ಬಳಕೆ ಕಡ್ಡಾಯ

    ಕೋಲಾರ: ತಾಲೂಕಿನ ವೇಮಗಲ್- ಕುರುಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಂಗಡಿ ಮಳಿಗೆಗಳ ಹಾಗೂ ಕೈಗಾರಿಕೆಗಳ ಮಾಲೀಕರು ನಾಮಫಲಕದಲ್ಲಿ ಶೇ.60 ಕನ್ನಡ ಭಾಷೆ ಅಳವಡಿಸಬೇಕು ಎಂದು ಪಟ್ಟಣ ಪಂಚಾಯಿತಿ ಮುಖÁ್ಯಽಕಾರಿ ಎಸ್.ಎಂ.ವೆಂಕಟೇಶ್ ಸೂಚಿಸಿದ್ದಾರೆ.

    ವೇಮಗಲ್- ಕುರುಗಲ್ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾಮಫಲಕದಲ್ಲಿ ಕನ್ನಡ ಅಳವಡಿಕೆ ಮಾಡಲು ನೀಡಿದ್ದ ಗಡುವು ಮುಗಿದಿದ್ದು, ಜು.15ರತನಕ ವಿಸ್ತರಿಸಲಾಗಿದೆ. ಈಗಲೂ ಯಾರಾದರು ವಿಳಂಬ ತೋರಿದರೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.
    ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆಯನ್ವಯ ಎಲ್ಲ್ಲ ಅಂಗಡಿ ಮುಂಗಟ್ಟುಗಳು, ಹೋಟೆಲ್‌ಗಳು, ಖಾಸಗಿ ಸಂಸ್ಥೆಗಳು, ವಾಣಿಜ್ಯ ಮಳಿಗೆಗಳು, ಕಾರ್ಖಾನೆಗಳು, ಅರೆಸರ್ಕಾರಿ, ಖಾಸಗಿ ಸಂಘ-ಸಂಸ್ಥೆ, ಶಿಕ್ಷಣ ಸಂಸ್ಥೆಗಳು ಸೇರಿ ಎಲ್ಲಾ ರೀತಿಯ ನಾಮ-ಫಲಕಗಳಲ್ಲಿ ಶೇ.೬೦ ಕನ್ನಡ ಭಾಷೆ ಬಳಕೆ ಕಡ್ಡಾಯ ಮಾಡಲಾಗಿದೆ. ಈಗ ನೀಡಿರುವ ಗಡುವಿನಲ್ಲಿ ಕ್ರಮಕೈಗೊಳ್ಳದಿದ್ದರೆ ಅಂತಹವರ ಪರವಾನಗಿ ರದ್ದು ಮಾಡಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಪ್ಲಾಸ್ಟಿಕ್ ಬಳಕೆ ನಿಷೇಧ: ರಾಜ್ಯಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ಕಳೆದ ವರ್ಷ ಜುಲೈನಲ್ಲಿಯೇ ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. ಆದರೂ, ಅನೇಕ ಅಂಗಡಿ ಮಾಲೀಕರು ಹಾಗೂ ಗೋದಾಮುಗಳಲ್ಲಿ ಪ್ಲಾಸ್ಟಿಕ್ ಶೇಖರಣೆ ಮಾಡಿರುವುದು ವಿಷಾದನೀಯ. ಜು.10ರ ಒಳಗೆ ಪ್ಲಾಸ್ಟಿಕ್ ಬಳಕೆ ನಿಷೇಽಸಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts