More

    ಜೀವನ ಮೌಲ್ಯ ಕಲಿಸಿ ವ್ಯಕ್ತಿತ್ವ ನಿರ್ಮಾಣ – ರೂಪಲೇಖ ಆಶಯ – ವಿವೇಕ ನೈಪುಣ್ಯ ಕಾರ್ಯಾಗಾರ

    ಪುತ್ತೂರು: ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಎಷ್ಟು ಮುಖ್ಯವೋ, ಅಷ್ಟೇ ಮಹತ್ತರವಾದ ಪಾತ್ರವನ್ನು ಇಂದು ಶಿಕ್ಷಕರೂ ನಿಭಾಯಿಸಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಆಪ್ತ ಸಮಾಲೋಚನೆಯ ಕೇಂದ್ರವನ್ನು ಮುಂದಿನ ದಿನಗಳಲ್ಲಿ ಪ್ರಾರಂಭಿಸುವ ಚಿಂತನೆಯನ್ನು ನಡೆಸಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘ ಸ್ಥಾಪನೆಯಾದ ಮೂಲ ಉದ್ದೇಶವೇ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಜತೆಗೆ ಸಂಸ್ಕಾರಯುತ ಜೀವನಕ್ಕೆ ಚೌಕಟ್ಟನ್ನು ನಿರ್ಮಿಸಿ, ಜೀವನ ಮೌಲ್ಯಗಳನ್ನು ಕಲಿಸಿ, ವ್ಯಕ್ತಿತ್ವ ನಿರ್ಮಾಣದೊಂದಿಗೆ ರಾಷ್ಟ್ರೀಯ ಜಾಗೃತಿ ಮೂಡಿಸುವುದು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆಕಾರ್ಯದರ್ಶಿ ರೂಪಲೇಖ ಹೇಳಿದರು.


    ವಿವೇಕಾನಂದ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಿಗಾಗಿ ಹದಿಹರೆಯದ ವಿದ್ಯಾರ್ಥಿಗಳು ಎದುರಿಸುವ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ವಿವಿಧ ಹಂತಗಳಲ್ಲಿ ಏರ್ಪಡಿಸಲಾದ ಕಾರ್ಯಗಾರ ’ವಿವೇಕ ನೈಪುಣ್ಯ’ ಉದ್ಘಾಟಿಸಿ ಮಾತನಾಡಿದರು.


    ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ. ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಲೇಖಕ ಹಾಗೂ ಡಾ. ಎ.ವಿ ಬಾಳಿಗ ಆಸ್ಪತ್ರೆ, ಉಡುಪಿ ಇಲ್ಲಿನ ಖ್ಯಾತ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಕಾರ್ಯಗಾರ ನಡೆಸಿಕೊಟ್ಟರು.


    ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ವತ್ಸಲಾ ರಾಜ್ಞಿ , ಡಾ. ಕೆ.ಎನ್. ಸುಬ್ರಹ್ಮಣ್ಯ, ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್‌ಶ್ಯಾನುಭೋಗ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ದೇವಿಚರಣ್ ರೈ, ವಿವೇಕಾನಂದ ಪದವಿಪೂರ್ವ ಕಾಲೇಜು ಹಾಗೂ ನರೇಂದ್ರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಕಾರ್ಯಗಾರದಲ್ಲಿ ಭಾಗಿಯಾದರು.


    ಉಪನ್ಯಾಸಕಿ ವಿದ್ಯಾ ಪಾರ್ವತಿ ಪ್ರಾರ್ಥಿಸಿದರು. ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಸ್ವಾಗತಿಸಿದರು. ಡಾ. ಶ್ರುತಿ ಎಂ.ಎಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts