More

    ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿರಾಟ್​ ಕೊಹ್ಲಿ ವಿದಾಯ

    ಬೆಂಗಳೂರು: ಭಾರತ ತಂಡದ ಮಾಜಿ ನಾಯಕ, ರನ್ ಮಷಿನ್ ವಿರಾಟ್​ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ ಸೂತ್ರಧಾರ ಎನಿಸಿಕೊಳ್ಳುವ ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.

    ಇದನ್ನೂ ಓದಿ:  T20 World Cup: 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    ಪಂದ್ಯದಲ್ಲಿ ನಿರ್ಣಾಯಕ ಅರ್ಧಶತಕ ಸಿಡಿಸಿದ ವಿರಾಟ್‌, ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಆ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ ನಿಜಕ್ಕೂ ಇದು ಅತ್ಯುತ್ತಮ ಕ್ಷಣ. ಯಾಕೆಂದರೆ ಮುಂದೆ ಯುವ ಪೀಳಿಗೆ ಕ್ರಿಕೆಟ್ ತಂಡದ ನೇತೃತ್ವ ವಹಿಸಿಕೊಳ್ಳಬೇಕು. ಇದು ನನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ಎಂದು ಹೇಳುವ ಮೂಲಕ ವಿರಾಟ್ ಕೊಹ್ಲಿ ಟಿ20ಗೆ ವಿದಾಯ ಹೇಳಿದ್ದಾರೆ.

    kohli

    ಕೊಹ್ಲಿ ಕೇವಲ ಟಿ20 ಮಾತ್ರ ಎಂದು ಹೇಳಿರುವ ಕಾರಣ ಅವರು ಏಕ ದಿನ ಹಾಗೂ ಟೆಸ್ಟ್​ ಪಂದ್ಯಗಳಲ್ಲಿ ಆಡಲಿದ್ದಾರೆ. ಹೆಚ್ಚು ಅಭಿಮಾನಿ ಬಳಗವನ್ನ ಹೊಂದಿರುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ತಮ್ಮ ಸೇವೆ ಮುಂದುವರಿಸಲಿದ್ದಾರೆ.

    ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts