More

    ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾ ಬಗ್ಗೆ ರಾಕಿಂಗ್ ಸ್ಟಾರ್ ಯಶ್‌ ಹೇಳಿದ್ದೇನು?

    ಬೆಂಗಳೂರು: ಕಲ್ಕಿ ಫಿವರ್ ಭಾರತದಲ್ಲಿ ಜೋರಾಗಿದೆ. ಎಲ್ಲೆಲ್ಲೂ ಕಲ್ಕಿ ಹವಾ ಎದ್ದು ಕಾಣುತ್ತಿದೆ. ಯಾವ ಥಿಯೇಟರ್ ನಲ್ಲಿ ನೋಡಿದರೂ ಇದೇ ಕ್ರೇಜ್. ಈಗ ಸಿನಿ ಪ್ರೇಮಿಗಳು ಭರ್ಜರಿಯಾಗಿ ಸಿನಿಮಾವನ್ನು ಎಂಜಾಯ್ ಮಾಡುತ್ತಿದ್ದಾರೆ.

    ಇದನ್ನೂ ಓದಿ: ಚೆನ್ನೈ ವಿಮಾನ ನಿಲ್ದಾಣದಲ್ಲಿ 21 ಕೋಟಿ ರೂ. ಮೌಲ್ಯದ ಕೊಕೇನ್ ವಶ!

    ಜೂನ್ 27ರಂದು ಬಿಡುಗಡೆಯಾದ ಕಲ್ಕಿ ಚಿತ್ರಕ್ಕೆ ಪ್ರೇಕ್ಷಕರು ಹುಚ್ಚೆದ್ದು ಕುಣಿಯುತ್ತಿದ್ದಾರೆ. ಎಲ್ಲ ವರ್ಗದ ಪ್ರೇಕ್ಷಕರಿಂದಲೂ ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಭಿಮಾನಿಗಳು, ಸಿನಿಮಾ ಪ್ರೇಮಿಗಳು ಮಾತ್ರವೇ ಅಲ್ಲದೆ ಸೆಲೆಬ್ರಿಟಿಗಳು ಸಹ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಖುಷಿ ಪಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಸ ಹಂಚಿಕೊಳ್ಳುತ್ತಿದ್ದಾರೆ.

    ‘ಕಲ್ಕಿ 2898 ಎಡಿ’ ಸಿನಿಮಾ ವೀಕ್ಷಿಸಿ ಸಿನಿಮಾ ಬಗ್ಗೆ ಮೆಚ್ಚಿ ತಮ್ಮ ಅಧಿಕೃತ ಖಾತೆಯಲ್ಲಿ ಅಪರೂಪಕ್ಕೆ ಟ್ಟೀಟ್​ ಮಾಡಿರುವ ರಾಕಿಂಗ್ ಸ್ಟಾರ್ ಯಶ್​, ಕಣ್ಣಿಗೆ ಹಬ್ಬವಾಗುವ ರೀತಿ ಅದ್ಭುತ ದೃಶ್ಯಗಳನ್ನು ಕಟ್ಟಿಕೊಟ್ಟಿರುವ ‘ಕಲ್ಕಿ 2898 ಎಡಿ’ ಚಿತ್ರತಂಡಕ್ಕೆ ಶುಭಾಶಯಗಳು. ಈ ಸಿನಿಮಾವು ಹೆಚ್ಚು ಸೃಜನಶೀಲವಾಗಿ ಕತೆಗಳನ್ನು ಹೇಳಲು ದಾರಿ ತೋರಿಸಿಕೊಟ್ಟಿದೆ. ನಿರ್ದೇಶಕ ನಾಗ್ ಅಶ್ವಿನ್ ಮತ್ತು ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್, ಸಿನಿಮಾ ಮಂದಿ ದೊಡ್ಡದಾಗಿ ಕನಸು ಕಂಡು ದೊಡ್ಡ ಹೆಜ್ಜೆಗಳನ್ನು ಇಡಲು ಧೈರ್ಯ ಕೊಟ್ಟಿದೆ’ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

    ಈ ಸಿನಿಮಾದ ‘ಡಾರ್ಲಿಂಗ್ ಪ್ರಭಾಸ್, ಅಮಿತಾಬ್ ಬಚ್ಚನ್ ಸರ್, ಕಮಲ್ ಹಾಸನ್ ಸರ್ ಮತ್ತು ದೀಪಿಕಾ ಪಡುಕೋಣೆ ಹಾಗೂ ಕೆಲವು ಸರ್ಪ್ರೈಸಿಂಗ್ ಕ್ಯಾಮಿಯೋ ಒಟ್ಟಿಗೆ ನೋಡುವುದು ಒಂದು ಅದ್ಭುತವಾದ ಅನುಭವ. ಇಂಥಹಾ ಒಂದು ಅದ್ಭುತವಾದ ಸಿನಿಮಾವನ್ನು ಪ್ರೇಕ್ಷಕರ ಎದುರು ತಂದ ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು, ಈ ಸಿನಿಮಾ ನಿಜಕ್ಕೂ ಬೆಳ್ಳಿತೆರೆಯನ್ನು ಬೆಳಗಿಸುತ್ತಿದೆ’ ಎಂದಿದ್ದಾರೆ.

    ಪ್ರಭಾಸ್​ ಪ್ರತಿ ಚಿತ್ರಕ್ಕೆ 150 ಕೋಟಿ ರೂ. ಪಡೆಯುತ್ತಾರೆ?: ತೆಲುಗು ಸೂಪರ್ ಸ್ಟಾರ್ ಬಾಹುಬಲಿ ಖ್ಯಾತಿಯ ಪ್ರಭಾಸ್ ಅಭಿನಯದ ಕಲ್ಕಿ 2898 AD ಸಿನಿಮಾ ರಿಲೀಸ್ ಆಗಿ ವ್ಯಾಪಕವಾಗಿ ಮೆಚ್ಚುಗೆ ಗಳಿಸಿದೆ. ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಬಹು ನಿರೀಕ್ಷಿತ ಸಿನಿಮಾ ಎಲ್ಲೆಡೆ ಜೂನ್ 27 ರಂದು ಬಿಡುಗಡೆಯಾಗಿದೆ. ಪ್ರಭಾಸ್ ಅವರು ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿಯಲ್ಲಿ ಭೈರವ ಪಾತ್ರಕ್ಕಾಗಿ 80 ಕೋಟಿ ರೂಪಾಯಿ ಚಾರ್ಜ್ ಮಾಡಿದ್ದಾರಂತೆ.

    ಈ ಚಿತ್ರಕ್ಕಾಗಿ ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರಿಗೆ ಸಮಾನವಾದ ಸಂಭಾವನೆ ನೀಡಲಾಗಿದೆ ಎಂದು ವರದಿಯೊಂದು ಹೇಳಿದೆ. ಕಲ್ಕಿ 2898 AD ಯನ್ನು 600 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾಗಿದೆ.
    ಜಾಗರಣ್ ವರದಿಯ ಪ್ರಕಾರ, ಪ್ರಭಾಸ್ ಸಾಮಾನ್ಯವಾಗಿ ಪ್ರತಿ ಚಿತ್ರಕ್ಕೆ 150 ಕೋಟಿ ರೂ. ಪಡೆಯುತ್ತಾರೆ. ಕಲ್ಕಿ 2898 AD ಗಾಗಿ, ಪ್ರಭಾಸ್ ತಮ್ಮ ಶುಲ್ಕವನ್ನು ಅರ್ಧಕ್ಕೆ ಕಡಿತಗೊಳಿಸಿದರು. ಪ್ರಭಾಸ್ 80 ಕೋಟಿ ರೂಪಾಯಿ ಚಾರ್ಜ್ ಮಾಡಿದ್ದಾರೆ ಎಂದು ವರದಿ ಹೇಳಿದೆ.

    ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts