More

    ಡ್ರಗ್ಸ್​ ಸೇವನೆ ಮಾನಸಿಕ ಕಾಯಿಲೆಯ ಲಕ್ಷಣ: ಮಮತಾದೇವಿ

    ಉಡುಪಿ: ಡ್ರಗ್ಸ್​ ಸೇವನೆ ಮಾನಸಿಕ ಕಾಯಿಲೆಯ ಲಕ್ಷಣವಾಗಿದೆ. ಮಾದಕ ವ್ಯಸನಕ್ಕೆ ಒಳಗಾದವರು ವ್ಯಸನಮುಕ್ತರಾಗಬೇಕು. ಮಾದಕ ವ್ಯಸನದ ಮಾನಸಿಕ ಮತ್ತು ದೈಹಿಕ ಕೆಡುಕುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೇ ನಿರಂತರ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್​ ಹೇಳಿದರು.

    ಅಜ್ಜರಕಾಡು ಡಾ. ಜಿ.ಶಂಕರ್​ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯು.ಜಿ.ಸಭಾಂಗಣದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ನಡೆದ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಮಾನಸಿಕ ಖಿನ್ನತೆ ಯಾರಿಗೂ ಕಾಣದ ದೊಡ್ಡ ಪಿಡುಗು. ಸಣ್ಣ-ಪುಟ್ಟ ಕಾರಣಗಳಿಗೆ, ಸೂಕ್ಷ$್ಮ ವಿಷಯಗಳ ಕಾರಣದಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಯು ತನಗೆ ಅರಿವಿಲ್ಲದಂತೆ ಮಾದಕ ವ್ಯಸನಿಯಾಗುತ್ತಾನೆ. ಈ ದುಶ್ಚಟಕ್ಕೆ ಬಲಿಯಾದ ವ್ಯಕ್ತಿಯು ಅನೇಕ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ. ಕೆ ಮಾತನಾಡಿ, ಮಾದಕ ವಸ್ತು ಸೇವನೆಯು ಸಾಮಾಜಿಕ ಪಿಡುಗಾಗಿದ್ದು, ಇದರ ಸೇವನೆಯಿಂದ ಆರೋಗ್ಯದ ಮೇಲೆ ಹಲವು ರೀತಿಯ ದುಷ್ಪರಿಣಾಮ ಉಂಟಾಗುತ್ತದೆ. ಈ ಬಗ್ಗೆ ಅರಿವಿದ್ದರೂ ಕೂಡ ಯುವಜನತೆ ವ್ಯಸನಿಗಳಾಗಿ ಅದರಿಂದ ಹೊರಬರಲಾಗದೆ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದರು.

    ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ. ಭಾಸ್ಕರ ಶೆಟ್ಟಿ ಎಸ್​. ಅಧ್ಯಕ್ಷತೆ ವಹಿಸಿ ಮಾತನಾಡಿ, ವಿನಾಶದ ಮೂಲವೇ ನಶೆ. ನಮ್ಮ ಸುತ್ತಮುತ್ತಲಿನಲ್ಲಿ ನಡೆಯುವ ಹೀನ ಕೃತ್ಯಗಳು, ಸಮಾಜ ದ್ರೋಹಿ ಹಾಗೂ ವಿಧ್ವಂಸಕ ಕೃತ್ಯಗಳಿಗೆ ನಶೆಯೇ ಮೂಲ ಕಾರಣ. ನಶಾ ಮುಕ್ತ ಸ್ವಸ್ಥ ಸಮಾಜ ನಿಮಾರ್ಣಕ್ಕೆ ಯುವಜನತೆ ಬೆನ್ನೆಲುಬಾಗಿ ನಿಲ್ಲಬೇಕು. ನಶಾ ಮುಕ್ತ ಭಾರತ ನಿಮಾರ್ಣದ ಕನಸನ್ನು ನನಸು ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

    ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್​. ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು. ರೇಂಜರ್ಸ್​ ಯುನಿಟ್​ನ ಸಂಚಾಲಕಿ ರಮ್ಯಾ ವಿ. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಐ.ಕ್ಯೂ.ಎ.ಸಿ ಸಂಚಾಲಕ ಸೋಜನ್​ ಕೆ.ಜೆ. ಉಪಸ್ಥಿತರಿದ್ದರು. ಮಾದಕ ದ್ರವ್ಯ ವಿರೋಧಿ ಘಟಕದ ಸಂಚಾಲಕಿ ಶುಭಾ ಬಿ.ಎಸ್​ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಶಿವಾಜಿ ವಂದಿಸಿದರೆ, ದಿವ್ಯಶ್ರೀ ನಿರೂಪಿಸಿದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts