More

    ಕಾಡು ಪ್ರಾಣಿಗಳ ಹಾವಳಿ ತಡೆಗೆ ಆಗ್ರಹ

    ಬೀದರ್: ಭಾಲ್ಕಿ ತಾಲ್ಲೂಕಿನ ಸಾಯಗಾಂವ್ ಗ್ರಾಮದ ರೈತರ ಹೊಲಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ವಕೀಲ ಕಿಶನರಾವ್ ಸಾಯಗಾಂವಕರ್ ಆಗ್ರಹಿಸಿದ್ದಾರೆ.
    ಈ ಕುರಿತು ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದ್ದಾರೆ.
    ಕಳೆದ ಹಲವು ದಿನಗಳಿಂದ ಗ್ರಾಮದ ಜಮೀನುಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಅತಿಯಾಗಿದೆ. ಕಾಡು ಹಂದಿ, ಜಿಂಕೆ, ಮಂಗ ಹಾಗೂ ನವಿಲುಗಳು ಹೊಲಗಳಲ್ಲಿ ಬಿತ್ತಿದ ತೊಗರಿ ಹಾಗೂ ಇತರ ಬೀಜಗಳನ್ನು ತಿಂದು ಹಾಕುತ್ತಿದೆ. ಕೋಟ್ಯಂತರ ರೂಪಾಯಿ ಬೆಳೆ ನಷ್ಟ ಉಂಟು ಮಾಡುತ್ತಿವೆ ಎಂದು ತಿಳಿಸಿದ್ದಾರೆ.
    ಕಾಡು ಪ್ರಾಣಿಗಳು ಅನೇಕ ರೈತರ ಮೇಲೆ ದಾಳಿ ಮಾಡಿವೆ. ಕೆಲ ಜೀವ ಹಾನಿಯಾಗಿದೆ. ಕಾರಣ, ರೈತರು ನಿತ್ಯ ಕೈಯಲ್ಲಿ ಜೀವ ಹಿಡಿದುಕೊಂಡು ತಮ್ಮ ಜಮೀನುಗಳಿಗೆ ಹೋಗುವ ಪರಿಸ್ಥಿತಿ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
    ಕೂಡಲೇ ಕಾಡು ಪ್ರಾಣಿಗಳನ್ನು ಕಾಡಿಗೆ ಸ್ಥಳಾಂತರಿಸಿ ರೈತರ ಹಿತ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts