More

    ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಚುರುಕುಗೊಳಿಸಿ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಸೂಚನೆ

    ಮಂಡ್ಯ: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಸೂಚನೆ ನೀಡಿದರು.
    ನಗರದ ಜಿಪಂ ಕಚೇರಿ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಅಂಗನವಾಡಿಗಳಲ್ಲಿ 6 ವರ್ಷದೊಳಗಿನ ಹಾಗೂ ಸರ್ಕಾರಿ/ ಅನುದಾನಿತ/ ಸರ್ಕಾರಿ ವಸತಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1 ರಿಂದ 12ನೇ ತರಗತಿವರಗಿನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ವರ್ಷಕ್ಕೆ ಎರಡು ಬಾರಿ ನಡೆಸಿ ಆರೋಗ್ಯದಲ್ಲಿ ಯಾವುದೇ ತೊಂದರೆಯಿದ್ದಲ್ಲಿ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ ಎಂದರು.
    ಕೆಲವು ಕಾಯಿಲೆಗಳು ಮಕ್ಕಳಿಗೆ ಹುಟ್ಟಿನಿಂದ ಬರುತ್ತದೆ. ಇನ್ನು ಕೆಲವರಿಗೆ ಪೋಷಕಾಂಶಗಳ ಕೊರತೆಯಿಂದ ಉಂಟಾಗುತ್ತದೆ. ಇವುಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಮಕ್ಕಳು ಗುಣಮುಖರಾಗುತ್ತಾರೆ. ವಿದ್ಯಾರ್ಥಿಗಳನ್ನು ವರ್ಷಕ್ಕೆ ಎರಡು ಬಾರಿ ಪರೀಕ್ಷೆಗೆ ಒಳಪಡಿಸುವುದರಿಂದ ಪರೀಕ್ಷೆಯ ಸಂದರ್ಭದಲ್ಲಿ ಮಕ್ಕಳಲ್ಲಿ ಬೆಳವಣಿಗೆಯಲ್ಲಿ ಯಾವುದೇ ತೊಂದರೆ ಇದ್ದಲ್ಲಿ ತಕ್ಷಣ ವರದಿ ಮಾಡಿ ಚಿಕಿತ್ಸೆಗೆ ಒಳಪಡಿಸಿ ಎಂದರು.
    ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts